Mysore

Kannada Rajyotsava Quiz Competition at Shree Swaminarayan Gurukul, Mysore

Published On: November 4, 2026 , Updated on : November 5, 2026

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಜ್ಞಾನದ ಕ್ವಿಜ್!

ಇಂದು 04-11-2026,  ಶ್ರೀ ಸ್ವಾಮಿನಾರಾಯಣ ಗುರುಕುಲ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಭವ್ಯವಾದ ಕ್ವಿಜ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ನಾಲ್ಕು ಸದನಗಳಾದ ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದ ದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಸಾಹಿತ್ಯ ಕುರಿತ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಅದ್ಭುತವಾಗಿ ಉತ್ತರಿಸಿದರು.

ಅಂತಿಮವಾಗಿ ಯಜುರ್ವೇದ ಸದನದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ವಿಜೇತರಾಗಿ ಹೊರಹೊಮ್ಮಿದರು!

ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು!

ಜೈ ಕರ್ನಾಟಕ ಮಾತೆ! ಸಿರಿಗನ್ನಡಂ ಗೆಲ್ಗೆ!